ಯಲ್ಲಾಪುರ: ತಾಲೂಕಿನ ಕಿರವತ್ತಿ ವಲಯ ಮಟ್ಟದ ಪ್ರೌಢಶಾಲೆಗಳ ಇಲಾಖೆ ಕ್ರೀಡಾಕೂಟವು ಬಿಸಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಎಸ್ಡಿಎಂಸಿ ಅಧ್ಯಕ್ಷ ಗೋಪಾಲಕೃಷ್ಣ ಭಗನಪಾಲ ಒಲಂಪಿಕ್ ಧ್ವಜಾರೋಹಣ ಮಾಡುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು. ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ್ ತಾರಿಕೊಪ್ಪ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸುವ ಮೂಲಕ ಕ್ರೀಡಾಕೂಟಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಕಿರವತ್ತಿ ವಲಯದ ಆರು ಪ್ರೌಢಶಾಲೆಗಳ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಶಾಲಾ ಮುಖ್ಯಾಧ್ಯಾಪಕ ಎಂ.ಆರ್.ನಾಯಕ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ್, ಶಿರಸಿ ಶೈಕ್ಷಣಿಕ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಜಯ್ ನಾಯಕ, ತಾಲೂಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್ ನಾಯಕ್ ಮುಂತಾದವರು ಭಾಗವಹಿಸಿದ್ದರು.