ಶಿರಸಿ: ಕಾರವಾರದಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಯಾದ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕದ ಸದುಪಯೋಗ ಪಡಿಸಿ ಸುತ್ತಲಿನ ಊರುಗಳ ಬಡ ರೋಗಿಗಳಿಗೆ ಅನುಕೂಲವಾಗುವಂತೆ ಸೇವೆ ಸಲ್ಲಿಸಿದ ಇಲ್ಲಿನ ಪ್ರತಿಷ್ಠಿತ ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಟಿ ಎಸ್ ಆಸ್ಪತ್ರೆ) ಸತತ ಮೂರನೇ ಬಾರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಟಿಎಸ್ಎಸ್ ಆಸ್ಪತ್ರೆಯು ಈ ಪ್ರಶಸ್ತಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಏಕೈಕ ಖಾಸಗಿ ಆಸ್ಪತ್ರೆಯಾಗಿದ್ದು,ಕಳೆದ ಮೂರು ವರ್ಷಗಳಿಂದಲೂ ಕೇಂದ್ರ ಸರ್ಕಾರದ ಪ್ರಸಿದ್ಧ ಯೋಜನೆಯಾದ ಆಯುಷ್ಮಾನ್ ಭಾರತ – ಆರೋಗ್ಯ ಕರ್ನಾಟಕದ ಅತಿ ಹೆಚ್ಚು ಫಲಾನುಭವಿಗಳನ್ನು ಹೊಂದಿದ ಖಾಸಗಿ ಆಸ್ಪತ್ರೆ ಇದಾಗಿದೆ. ಆಸ್ಪತ್ರೆಯ ಉಪ ಆಡಳಿತಾಧಿಕಾರಿಗಳಾದ ಅಕ್ಷಯ್ ಕುಮಾರ್ ಹೆಗಡೆ ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ಮಂತ್ರಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಇವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.