Slide
Slide
Slide
previous arrow
next arrow

ಶಾಸಕ ದೇಶಪಾಂಡೆ ಭೇಟಿಯಾಗಿ ಅಭಿನಂದಿಸಿದ ಸಾಹಿತಿ ಮಾಸ್ಕೇರಿ ನಾಯಕ

300x250 AD

ದಾಂಡೇಲಿ: ಶಾಸಕ ಆರ್.ವಿ.ದೇಶಪಾಂಡೆ ಅವರನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕ ಭೇಟಿಯಾದರು.
ವಿಧಾನಸಭೆಗೆ 9ನೇ ಬಾರಿ ಆಯ್ಕೆಯಾದ ಆರ್.ವಿ.ದೇಶಪಾಂಡೆ ಅವರನ್ನು ಮಾಸ್ಕೇರಿ ಸಾಹಿತ್ಯಾರಾಧನಾ ಸಂಸ್ಥೆಯಿಂದ ಮಾಸ್ಕೇರಿ ಎಂ.ಕೆ.ನಾಯಕ ಅವರು ಗೌರವಪೂರ್ವಕವಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಂಸ್ಥೆ ವತಿಯಿಂದ ಇತ್ತೀಚೆಗೆ ಬಿಡುಗಡೆಗೊಂಡ 108ನೇ ಕೃತಿಯನ್ನು ಆರ್.ವಿ.ದೇಶಪಾಂಡೆ ಅವರಿಗೆ ನೀಡಿದರು.

ಇದೇ ಸಂದರ್ಭದಲ್ಲಿ ದೇಶಪಾಂಡೆಯವರು ಮಾಸ್ಕೇರಿ ಸಾಹಿತ್ಯಾರಾಧನಾ ಸಂಸ್ಥೆಯ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಚಟುವಟಿಕೆಗಳ ಬಗ್ಗೆ ಮಾಸ್ಕೇರಿ ಎಂ.ಕೆ.ನಾಯಕ ಅವರ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ದಾಂಡೇಲಿ ತಾಲ್ಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top