ಯಲ್ಲಾಪುರ: ತಾಲೂಕಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕಾ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ, ಕಳೆದ ವರ್ಷದಂತೆ ಈ ವರ್ಷವೂ ಕೂಡ ತಾಲೂಕಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಪ್ರೇರಣಾ ಶಿಬಿರವನ್ನು ವಾರ್ಷಿಕ ಪರೀಕ್ಷೆಯವರೆಗೂ ಪ್ರತಿ ಭಾನುವಾರದಂದು ನಡೆಸಲಿದ್ದು, ತಾಲೂಕಿನ ಹಾಗೂ ಜಿಲ್ಲೆಯ ಸಮರ್ಥ ಸಂಪನ್ಮೂಲ ವ್ಯಕ್ತಿಗಳಿಂದ ಶಿಬಿರ ನಡೆಸುವ ಉದ್ದೇಶವನ್ನು ಹೊಂದಲಾಗಿದೆ ಎಂದರು.
ಸoಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಿ.ಎಸ್.ಭಟ್ಟ ಶೇವ್ಕಾರ್, ಸಂಸ್ಥೆಯ ವ್ಯವಸ್ಥಾಪಕ ಅಜಯ ಭಾರತೀಯ, ವಿಶ್ವದರ್ಶನ ಇಡಗುಂದಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಪ್ರಸನ್ನ ಹೆಗಡೆ, ವಿಶ್ವದರ್ಶನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ದತ್ತಾತ್ರೇಯ ಗಾಂವ್ಕರ್, ಕೇಂದ್ರೀಯ ಶಾಲೆಯ ಪ್ರಾಂಶುಪಾಲರಾದ ಮಹಾದೇವಿ ಭಟ್ ಸೇರಿದಂತೆ ಶಿಕ್ಷಕರುಗಳು, ಉಪನ್ಯಾಸಕರುಗಳು ಇದ್ದರು. ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಮುಕ್ತಾ ಶಂಕರ ಸ್ವಾಗತಿಸಿದರು. ಖೈರೂನ್ ಶೈಖ್ ವಂದಿಸಿದರು.