ಯಲ್ಲಾಪುರ: ಸಹಕಾರಿ ಸಂಘಗಳು ಇಂದು ವಿವಿಧ ಉದ್ದೇಶಗಳ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಈಡೇರಿಸುತ್ತಿವೆ. ಹಳ್ಳಿಗಳ ಆರ್ಥಿಕತೆಯ ಪ್ರಗತಿಗೆ ಸೇವಾ ಸಹಕಾರಿ ಸಂಘಗಳು ಪ್ರಜಾಪ್ರಭುತ್ವದ ಪಾಠಶಾಲೆ ಎಂದು ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ನಿವೃತ್ತ ಉಪನಿರ್ದೇಶಕ ಜಿ.ಕೆ.ರಾಮಪ್ಪ ಅಭಿಪ್ರಾಯಪಟ್ಟರು.
ವಜ್ರಳ್ಳಿಯ ಆದರ್ಶ ಸೇವಾ ಸಹಕಾರಿ ಸಂಘ, ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘ, ಮಾವಿನಮನೆ ಸೇವಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ, ವಜ್ರಳ್ಳಿಯ ಆದರ್ಶ ಸಭಾಭವನದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಹಕಾರಿ ಕಾಯ್ದೆ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಸಹಕಾರಿ ಆಡಳಿತ ಮಂಡಳಿ ಸದಸ್ಯರ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತದ್ದರು.
ಸಭೆಯಲ್ಲಿ ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಉಮೇಶ ಭಾಗ್ವತ, ಮಾವಿನಮನೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಬ್ಬಣ್ಣ ಬೋಳಮನೆ, ಉಪಸ್ಥಿತರಿದ್ದರು. ವಜ್ರಳ್ಳಿ ಆದರ್ಶ ಸೇವಾ ಸಹಕಾರಿ ಸಂಘದ ಅಧ್ಯಕ್ಷ ದತ್ತಾತ್ರೇಯ ಭಟ್ಟ ತಾರಗಾರ ಅಧ್ಯಕ್ಷತೆ ವಹಿಸಿದ್ದರು. ಆದರ್ಶ ಸೇವಾ ಸಹಕಾರಿ ಸಂಘದ ಸದಸ್ಯ ನಾಗೇಂದ್ರ ಭಟ್ಟ ನಡಿಗೆಮನೆ ಸ್ವಾಗತಿಸಿದರು. ಡಿ.ಎ.ಗಾಂವ್ಕರ ನಿರೂಪಿಸಿದರು. ಮುಖ್ಯ ವ್ಯವಸ್ಥಾಪಕ ಜಿ.ವಿ.ಭಟ್ಟ ಅಡ್ಕೇಮನೆ ಕೊನೆಯಲ್ಲಿ ವಂದಿಸಿದರು. ನಿವೃತ್ತ ಉಪನಿರ್ದೇಶಕ ಕೆ.ರಾಮಪ್ಪ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.