ಕಾರವಾರ: ಇಲ್ಲಿನ ಬಿಜೆಪಿ ಗ್ರಾಮೀಣ ಮಂಡಲದ ವಿಶೇಷ ಸಭೆಯನ್ನ ಪಕ್ಷದ ಕಚೇರಿಯಲ್ಲಿ ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸುವ ಮುಖೇನ ಆರಂಭಿಸಲಾಯಿತು. ಸಭೆಯಲ್ಲಿ ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿಶೇಷ ಸಮಯ ಕೊಟ್ಟು ಪಕ್ಷವನ್ನು ಮುಂದಿನ ಲೋಕಸಭಾ ಚುನಾವಣೆಗೆ ಗಟ್ಟಿಗೊಳಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ನಾವು ಬೆಂಬಲಿಸೋಣ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ರೂಪಾಲಿ ನಾಯ್ಕರವರು ಕ್ಷೇತ್ರಕ್ಕೆ ಈ ಹಿಂದಿನ ಬಿಜೆಪಿ ಸರಕಾರದಿಂದ ಅತೀ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಗೊಳಿಸಿದ್ದಾರೆ. ಕೆಲವೇ ಮತದ ಅಂತರದಿ0ದ ಸೋತರು ಪಕ್ಷ ಸಂಘಟನೆಯಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು.
ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ, ಕಾಂಗ್ರೆಸ್ ಸರಕಾರ ನಮ್ಮ ಸರಕಾರ ಜನತೆಗೆ ನೀಡಿದ ಎಲ್ಲಾ ಸವಲತ್ತುಗಳನ್ನು ರದ್ದುಗೊಳಿಸಿದೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತರು ನಮ್ಮ ಸರಕಾರ ಜಾರಿ ಗೊಳಿಸಿದ ಸೌಲಭ್ಯಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದರು.
ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ್ ಗುನಗಿ ಗೀತೆ ಹಾಡಿ ಕಾರ್ಯಕರ್ತರನ್ನು ಸ್ವಾಗತಿಸಿದರು. ಸುಜಾತಾ ಬಾಂದೇಕರ ವಂದನಾರ್ಪಣೆ ಸಲ್ಲಿಸಿ ಸಭೆಯನ್ನು ಮುಕ್ತಾಯಗೊಳಿಸಿದರು. ವೇದಿಕೆ ಮೇಲೆ ಗ್ರಾಮೀಣ ಪ್ರಭಾರಿ ಗಜಾನನ ಗುನಗಾ, ನಗರ ಪ್ರಭಾರಿ ಆರತಿ ಗೌಡ, ಜಿಲ್ಲಾ ಮಹಿಳಾ ಉಪಾಧ್ಯಕ್ಷರಾದ ನಯನಾ ನೀಲಾವರ, ಜಿಲ್ಲಾ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಉದಯ್ ಶೆಟ್ಟಿ,ಬಿ. ಏನ್. ಸೂರ್ಯಪ್ರಕಾಶ್, ಗ್ರಾಮೀಣ ಕಾರ್ಯದರ್ಶಿಸುಜಾತಾ ಬಾಂದೇಕರ, ದತ್ತಾರಾಮ ಬಾಂದೇಕರ, ಸಾಮಾಜಿಕ ಜಾಲತಾಣದ ಕಿಶನ್ ಕಾಂಬ್ಳೆ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.