Slide
Slide
Slide
previous arrow
next arrow

ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಟಾಟಾ ಮೋಟ್‌ರ್ಸ್ ಧಾರವಾಡ ಇವರ ಜಂಟಿ ಸಹಯೋಗದಲ್ಲಿ ನಿರುದ್ಯೋಗ ಯುವಕರಿಗೆ 30 ದಿನಗಳ ಲಘು ವಾಹನಾ ಚಾಲನಾ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ 20ರಿಂದ 45 ವರ್ಷ ವಯೋಮಿತಿಯ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಸೆ.30ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಅರಸಟಿ ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ ಇಲ್ಲಿಗೆ ಅರ್ಜಿ ಸಲ್ಲಿಸಬೇಕು.
ತರಬೇತಿ ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: tel:+9108284298547 ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top