ಶಿರಸಿ: ಹೆಗಡೆಕಟ್ಟಾದ ಶ್ರೀ ಗಜಾನನ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಸೌಖ್ಯ ವಿನಾಯಕ ಹೆಗಡೆ 2022 ರ ಒಲಂಪಿಯಾಡ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಬೆಸ್ಟ್ ಅಚೀವರ್ ಸ್ಥಾನ ಗಳಿಸಿ ಗಮನ ಸೆಳೆದಿದ್ದಾಳೆ
ಚಿರಂತನ ಇನ್ಸ್ಟಿಟ್ಯೂಟ್ ಆಫ್ ಪ್ಯಾಶನ್ ಟೆಕ್ನಾಲಜಿ ಕಾಲೇಜ್ ಶಿರಸಿ ಈ ಬಗ್ಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದೆ. ಪ್ರಶಸ್ತಿಯು 10,000 ರೂಪಾಯಿ, ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಒಳಗೊಂಡಿದೆ. ವಿದ್ಯಾರ್ಥಿನಿಯ ಸಾಧನೆಗೆ ಶ್ರೀ ಗಜಾನನ ಪ್ರೌಢಶಾಲೆಯ ಅಧ್ಯಕ್ಷ ಎಂ.ಆರ್. ಹೆಗಡೆ ಹೊನ್ನೆಕಟ್ಟಾ, ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ.