ಅಂಕೋಲಾ: ಅಂಬಾರಕೊಡ್ಲ ರಸ್ತೆಗೆ ಹೊಂದಿಕೊಂಡಿರುವ ರೊಯ್ ಪ್ಯಾಶನ್ ಬಟ್ಟೆ ಅಂಗಡಿಗೆ ಮತ್ತು ಪಕ್ಕದಲ್ಲಿದ್ದ ಮಹಾಸತಿ ಮೊಬೈಲ್ ಅಂಗಡಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಬೆಂಕಿ ಅನಾಹುತದಲ್ಲಿ ಬಟ್ಟೆ ಅಂಗಡಿ ಸಂಪೂರ್ಣವಾಗಿ ಸುಟ್ಟು
ಕರಕಲಾಗಿದ್ದು, ಮೊಬೈಲ್ ಅಂಗಡಿಗೂ ಬೆಂಕಿ ತಗುಲಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಹರಸಾಹಸಪಟ್ಟು ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಸುಮಾರು 12 ರಿಂದ 15 ಲಕ್ಷ ರೂಪಾಯಿ ಮೌಲ್ಯದ ಬಟ್ಟೆ ಹಾನಿಯಾಗಿರಬಹುದೆಂದು ಅಂದಾಜಿಸಲಾಗಿದೆ.