ಕಾರವಾರ: ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದ್ದು, ಅವುಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳನ್ನು ಬರ ಪೀಡಿತ ತಾಲೂಕಿನ ಪಟ್ಟಿಗೆ ಸೇರಿದೆ. ಅದರಲ್ಲಿ 161 ತೀವ್ರ ಬರ ಪೀಡಿತ ತಾಲೂಕುಗಳು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ವಿಭಾಗದ ಸರ್ಕಾರದ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಘೋಷಣೆ ಮಾಡಿದ್ದಾರೆ.
ತೀವ್ರ ಬರ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಹಳಿಯಾಳ, ಮುಂಡಗೋಡ, ಶಿರಸಿ ಮತ್ತು ಯಲ್ಲಾಪುರ ತಾಲೂಕುಗಳನ್ನು ಸೇರಿಸಲಾಗಿದ್ದು, ಸಾಧಾರಣ ಬರ ಪೀಡಿತವಾಗಿರುವ ತಾಲೂಕುಗಳ ಪಟ್ಟಿಯಲ್ಲಿ ಅಂಕೋಲಾ, ಕಾರವಾರ, ಕುಮಟಾ, ಜೊಯಿಡಾ,ಭಟ್ಕಳವನ್ನು ಸೇರಿಸಲಾಗಿದೆ.