Slide
Slide
Slide
previous arrow
next arrow

ಹಿರಿಯರ ಮಾರ್ಗದರ್ಶನದಿಂದ ಊರಿನ ಅಭಿವೃದ್ಧಿ ಸಾಧ್ಯ: ರೂಪಾಲಿ ನಾಯ್ಕ

300x250 AD

ಅಂಕೋಲಾ: ಹಿರಿಯರು, ಪ್ರಮುಖರ ಮಾರ್ಗದರ್ಶನ, ಆಶೀರ್ವಾದ ಇದ್ದಾಗ ಮಾತ್ರ ಊರು ಅಭಿವೃದ್ಧಿ ಆಗಲು ಸಾಧ್ಯ ಎಂದು ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.

ತಾಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಕಲಬೇಣದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿದ ನಿವೃತ್ತ ನೌಕರರ ವಿವಿಧೋದ್ದೇಶಗಳ ಸಂಘದ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾನು ಕೊಟ್ಟ ಭರವಸೆಯಂತೆ ಇಲ್ಲಿ ಕಟ್ಟಡ ನಿರ್ಮಾಣವಾಗಿದೆ. ಇದೊಂದು ಸಮಾಧಾನದ ಸಂಗತಿಯಾಗಿದೆ. ನಿವೃತ್ತ ಅಧಿಕಾರಿಗಳು, ಶಿಕ್ಷಕರು ಎಲ್ಲ ಸೇರಿ ಸಂಘಟನೆ ಮಾಡಿಕೊಂಡು ಊರಿನ ಅಭಿವೃದ್ಧಿಗೆ ಪ್ರಯತ್ನಿಸುತ್ತಿರುವುದು ಅತ್ಯಂತ ಶ್ಲಾಘನೀಯ ವಿಚಾರವಾಗಿದೆ. ಗುರು ಹಿರಿಯರ ಆಶೀರ್ವಾದ ಇದ್ದರೆ ಊರಿನ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

ನಾನು ಅಧಿಕಾರದಲ್ಲಿ ಇದ್ದಾಗಲೂ ಅಷ್ಟೇ, ಇಲ್ಲದಿದ್ದಾಗಲೂ ಅಷ್ಟೇ ಜನರಿಗೆ ಯಾವುದೆ ರೀತಿಯಲ್ಲಿ ಅನ್ಯಾಯವಾಗಬಾರದು ಎಂಬ ನಿಟ್ಟಿನಲ್ಲಿ ಕರ್ತವ್ಯ ಮಾಡುತ್ತೇನೆ. ಜನರ ಹಿತಕ್ಕಾಗಿ, ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ನಾನು ಆದ್ಯತೆ ನೀಡುತ್ತೇನೆ ಎಂದು ಹೇಳಿದರು. ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಚರಂಡಿ ನಿರ್ಮಾಣ ಮಾತ್ರವಲ್ಲ. ಶಿಕ್ಷಣ ಮತ್ತು ಇತರ ಕ್ಷೇತ್ರಗಳಲ್ಲೂ ಅಭಿವೃದ್ಧಿಯಾಗಬೇಕು. ಶಿಕ್ಷಣ ಕ್ಷೇತ್ರ ಅಭಿವೃದ್ಧಿಯಾದರೆ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಆಗಲು ಸಾಧ್ಯ. ಇದಕ್ಕಾಗಿಯೇ ನಾನು ವಿಶೇಷ ಅನುದಾನದಲ್ಲಿ 26 ಕೋಟಿ ರೂ.ಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ನೀಡಿದ್ದಾಗಿ ತಿಳಿಸಿದರು.

300x250 AD

ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಮೀಸಲಾತಿ ವಿಧೇಯಕವನ್ನು ತಂದು ಮಹಿಳೆಯರಿಗೆ ನ್ಯಾಯ ದೊರಕಿಸಿಕೊಟ್ಟಿದ್ದಾರೆ. ಮಹಿಳೆಯರ ಪಾಲಿಗೆ ಇದೊಂದು ಐತಿಹಾಸಿಕ ವಿಧೇಯಕವಾಗಿದೆ. ಇದಕ್ಕಾಗಿ ಮಹಿಳೆಯರ ಪರವಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ರೂಪಾಲಿ ಎಸ್.ನಾಯ್ಕ ತಿಳಿಸಿದರು.

ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಿವೃತ್ತ ನೌಕರರು, ಗಣ್ಯರು, ಪ್ರಮುಖರು ಪಾಲ್ಗೊಂಡಿದ್ದರು.

Share This
300x250 AD
300x250 AD
300x250 AD
Back to top