Slide
Slide
Slide
previous arrow
next arrow

ಲಯನ್ಸ್ ಶಾಲೆಯ ಅನ್ವಿತಾ ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಸ.ಹಿ.ಪ್ರಾ. ಶಾಲೆ ಬಾಪೇಲಿ, ಜೊಯಿಡಾ ಇವರ ಸಹಯೋಗದಲ್ಲಿ ನಡೆಸಲಾದ 14 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಮತ್ತು ಯೋಗಾಸನ ಸ್ಪರ್ಧೆಯಲ್ಲಿ ಇಲ್ಲಿನ ಲಯನ್ಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಚೆಸ್ ಸ್ಪರ್ಧೆಯಲ್ಲಿ 6 ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಎನ್. ಹೆಗಡೆ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.

ಯೋಗಾಸನ ಸ್ಪರ್ಧೆಯಲ್ಲಿ 7 ನೇ ತರಗತಿಯ ವಿದ್ಯಾರ್ಥಿನಿ ಅರ್ಪಿತಾ ಹೆಗಡೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ವಿದ್ಯಾರ್ಥಿಗಳು ಶಾಲೆಯ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕಿ ಚೇತನಾ ಪಾವಸ್ಕರ್ ಮತ್ತು ನಾಗರಾಜ ಜೋಗಳೇಕರ್ ಮಾರ್ಗದರ್ಶನ ನೀಡಿರುತ್ತಾರೆ.

300x250 AD

ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡÀಳಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಶಾಲೆಯ ಮುಖ್ಯಾಧ್ಯಾಪಕರು, ಶಿಕ್ಷಕ-ಶಿಕ್ಷಕೇತರ ವೃಂದ, ಲಯನ್ಸ್ ಬಳಗ ಮತ್ತು ಪಾಲಕರ ವೃಂದ ಅಭಿನಂದಿಸಿದ್ದಾರೆ.

Share This
300x250 AD
300x250 AD
300x250 AD
Back to top