Slide
Slide
Slide
previous arrow
next arrow

ಬದನಗೋಡ ಗ್ರಾ.ಪಂ ವ್ಯಾಪ್ತಿಯಲ್ಲಿ ‘ಗ್ರಾಮ ವಾಸ್ತವ್ಯ’ ಮಾಡುವಂತೆ ಗ್ರಾಮಸ್ಥರ ಆಗ್ರಹ

300x250 AD

ಶಿರಸಿ: ತಾಲೂಕಿನ ಅತಿ ದೊಡ್ಡ ಗ್ರಾ.ಪಂಗಳಲ್ಲೊಂದಾದ ಬದನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸಾಕಷ್ಟು ಸಾರ್ವಜನಿಕ ಸಮಸ್ಯೆ, ಕುಂದು-ಕೊರತೆಗಳಿದ್ದು, ತಹಸೀಲ್ದಾರರು ಈ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಹೂಡಿ, ಇಲ್ಲಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ, ಸ್ಥಳೀಯರು ಮನವಿ ಸಲ್ಲಿಸಿದ್ದಾರೆ‌.

ಬದನಗೋಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 12000 ಕ್ಕೂ ಅಧಿಕ ಜನ ಸಂಖ್ಯೆಯಿದ್ದು, ಸಾಕಷ್ಟು ಸಾರ್ವಜನಿಕ ಸಮಸ್ಯೆಗಳಿವೆ‌‌. ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಸ್ಥಳೀಯರು 2018 ರಿಂದಲೂ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ, ಇಲ್ಲಿನ ಕುಂದು-ಕೊರತೆಗಳ ಬಗ್ಗೆ ಚರ್ಚಿಸಲು ಯಾವುದೇ ಸಭೆ ನಡೆದಿಲ್ಲ. ಇದರಿಂದ ಇಲ್ಲಿನ ಸಮಸ್ಯೆಗಳು ಹಾಗೆಯೇ ಉಳಿದಿವೆ. ಆದ್ದರಿಂದ ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಿ, ಇಲ್ಲಿನ ಸಮಸ್ಯೆ, ಕುಂದುಕೊರತೆಗಳನ್ನು ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಯುವರಾಜ ಜೆ‌. ಗೌಡ ಮನವಿ ಸಲ್ಲಿಸಿ, ಒತ್ತಾಯಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top