ಹೊನ್ನಾವರ: ತಾಲೂಕಿನ ಗೇರಸೊಪ್ಪ ವಲಯ ಅರಣ್ಯ ಕಚೇರಿಯ ವ್ಯಾಪ್ತಿಯಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಅ.3, ಮಂಗಳವಾರ, ಮುಂಜಾನೆ 10:30 ಕ್ಕೆ ಗೇರಸೊಪ್ಪ ವಲಯ ಕಚೇರಿಯಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಮಂಜೂರಿಗೆ ಸಂಬ0ಧಿಸಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳ ವಿವಿಧ ರೀತಿಯ ಕಾನೂನಾತ್ಮಕ ಸಮಸ್ಯೆಗಳ ಕುರಿತು ಅಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿ ಉಪಸ್ಥಿತಿಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಆಸಕ್ತ ಅರಣ್ಯವಾಸಿಗಳು ಚರ್ಚೆಯ ಸಭೆಯಲ್ಲಿ ಉಪಸ್ಥಿತರಿಸಲು ರವೀಂದ್ರ ನಾಯ್ಕ ಕೋರಿದ್ದಾರೆ.