ಕಾರವಾರ: ಕನಾಟಕ ಮರಾಠಿ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ಶ್ರೀಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಬೇಜಾವು– ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರವರಿ ಯೋಜನೆ), ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಸಾಲವನ್ನು ಪಡೆಯಲು ಇಚ್ಛಿಸುವವರುಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3 ಬಿ ಅಡಿಯಲ್ಲಿ 2 (ಎ) ಯಿಂದ 2 (ಎಫ್) ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3 ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು, ಹಾಗೂ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲ್ಯಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬAಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು, ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ 33%, ವಿಕಲಚೇತನರಿಗೆ ಶೇ.5%, ಹಾಗೂ ತೃತೀಯ ಲಿಂಗದವರಿಗೆ ಶೇ 1% ಮೀಸಲಾತಿ ಇರಿಸಿದೆ.
ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ. ಅಕ್ಟೋಬರ್ 30 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಯೋಜನೆಗಳ ಮಾರ್ಗಸೂಚಿಗಳು ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲೆ ವ್ಯವಸ್ಥಾಪಕರ ಕಚೇರಿ ವಿಳಾಸ ಹಾಗೂ ಹೆಚ್ಚಿನ ವಿವರಗಳನ್ನು https://kmcdc.karnataka.gov.in ಮೂಲಕ ನೋಡಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:tel:+919353808101, tel:+9108382223229ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠಿ ಸಮುದಾಯಗಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.