ಶಿರಸಿ: ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಶಿರಸಿ ಶೈಕ್ಷಣಿಕ ಜಿಲ್ಲೆ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಶಿರಸಿ ಸಂಯುಕ್ತ ಆಶ್ರಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ಸಿಆರ್ಪಿ ಬಿಆರ್ಪಿಗಳ ಒಂದು ದಿನದ ಸ್ಕೌಟಿಂಗ್ ಮತ್ತು ಗೈಡಿಂಗ್ ಮಾಹಿತಿ ಕಾರ್ಯಾಗಾರವು ಇಲ್ಲಿನ ಜೆಎಮ್ಜೆ ವಿದ್ಯಾ ಸಂಸ್ಥೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಉದ್ಘಾಟಿಸಿ, ಎಲ್ಲರೂ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿ ಬನ್ನಿ, ಕಬ್, ಬುಲ್ ಬುಲ್, ಸ್ಕೌಟ್ ಮತ್ತು ಗೈಡ್ ಘಟಕಗಳ ಪ್ರಾರಂಭಿಸಲು ಸಹಕರಿಸಬೇಕೆಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧಾರವಾಡದ ಶಾಲಾ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಗಜಾನನ ಮನ್ನಿಕೇರಿ ಮಾತನಾಡಿ, ಶಿರಸಿ ಶೈಕ್ಷಣಿಕ ಜಿಲ್ಲೆ ಎಲ್ಲದರಲ್ಲೂ ಮುಂಚೂಣಿಯಲ್ಲಿ ಇದೆ. ಸ್ಕೌಟಿಂಗ್ ಮತ್ತು ಗೈಡಿಂಗ್ನಲ್ಲಿ ಮೊದಲ ಸ್ಥಾನ ಪಡೆಯಬೇಕು ಎಂದರು. ಅದಕ್ಕೆ ಶಿಕ್ಷಣಾಧಿಕಾರಿಗಳು, ಸಮನ್ವಯಾಧಿಕಾರಿಗಳು, ಸಿಆರ್ಪಿ, ಬಿಆರ್ಪಿಗಳು ಸಹಕರಿಸಲು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕ ಪಿ.ಬಸವರಾಜ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಶಾಲೆಗಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ದಳಗಳನ್ನು ಪ್ರಾರಂಭಿಸಬೇಕೆ0ದು ಅಧಿಕಾರಿಗಳಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಪಿ.ಜಿ.ಆರ್ ಸಿಂಧ್ಯಾ, ಗಜಾನನ ಮನ್ನಿಕೇರಿ ಅವರನ್ನ ಜಿಲ್ಲಾ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ತರಬೇತಿ ಆಯುಕ್ತ ಪ್ರತಿಮಕುಮಾರ, ಸ್ಕೌಟ್ಸ್ ಜಿಲ್ಲಾ ತರಬೇತಿ ಆಯುಕ್ತ ಚಂದ್ರಶೇಖರ ಎಸ್.ಸಿ, ಸ್ಕೌಟ್ಸ್ ರಾಜ್ಯ ಪ್ರತಿನಿಧಿ ನವೀನಕುಮಾರ ಎ.ಜಿ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಯಲ್ಲಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಸಿದ್ದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಆಯ್.ನಾಯ್ಕ, ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ, ಅಕ್ಷರದಾಸೋಹ ಅಧಿಕಾರಿ ಸದಾನಂದ ಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ (ಪ್ರಭಾರಿ) ಪ್ರಕಾಶ ತಾರಿಕೋಪ್ಪ, ಜಿಲ್ಲಾ ಮುಖ್ಯ ಆಯುಕ್ತ ಎಮ್.ಎಮ್.ಭಟ್, ಸ್ಕೌಟ್ ಜಿಲ್ಲಾ ಆಯುಕ್ತ ವಿ.ಎಚ್.ಭಟ್ಕಳ, ಗೈಡ್ ಜಿಲ್ಲಾ ಆಯುಕ್ತೆ ಜ್ಯೋತಿ ಭಟ್, ಜಿಲ್ಲಾ ಕಾರ್ಯದರ್ಶಿ ಟಿ.ಕೆ.ನಾಯ್ಕ, ಸಹಾಯಕ ರಾಜ್ಯ ಸಂಘಟನಾ ಆಯುಕ್ತ ವಿರೇಶ ಮಾದರ ಉಪಸ್ಥಿತರಿದ್ದರು.