Slide
Slide
Slide
previous arrow
next arrow

ಹಿಂದೂಗಳನ್ನು ಕಾಂಗ್ರೆಸ್ ವಿಭಜಿಸುತ್ತಿದೆ ;  ಪ್ರಧಾನಿ ಮೋದಿ

300x250 AD

ಜಗದಲ್‌ಪುರ: ಕಾಂಗ್ರೆಸ್‌ ಪಕ್ಷವು ಸಮಾಜದಲ್ಲಿ ಒಡಕು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು.

ಛತ್ತೀಸ್ಗಢ ಜಗದಲ್‌ಪುರದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಭಾರತದ ಸಂಪನ್ಮೂಲಗಳ ಮೇಲಿನ ಮೊದಲ ಹಕ್ಕನ್ನು ಈ ದೇಶದ ಬಡವರು ಹೊಂದಿದ್ದಾರೆ. ಕಾಂಗ್ರೆಸ್ ನಾಯಕರು ಜಿತ್ನಿ ಆಬಾದಿ, ಉತ್ನಾ ಹಕ್ ಎಂದು ಹೇಳುತ್ತಿದ್ದಾರೆ. ದೇಶದ ಅತಿದೊಡ್ಡ ಜನಸಂಖ್ಯೆ ಎಂದರೆ ಬಡವರು. ಅವರ ಕಲ್ಯಾಣವೇ ನನ್ನ ಉದ್ದೇಶವಾಗಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ಸಂಪನ್ಮೂಲಗಳಲ್ಲಿ ಅಲ್ಪಸಂಖ್ಯಾತರಿಗೆ ಮೊದಲ ಹಕ್ಕು ಎಂದು ಹೇಳುತ್ತಿದ್ದರು. ಆದರೆ, ಈಗ ಅಧಿಕ ಜನಸಂಖ್ಯೆಯನ್ನು ಹೊಂದಿರುವವರಿಗೆ ಮೊದಲ ಹಕ್ಕು ಎಂಬುದನ್ನು ಕಾಂಗ್ರೆಸ್ ಹೇಳುತ್ತಿದೆ. ಜನಸಂಖ್ಯೆಯು ಯಾರಿಗೆ ಮೊದಲ ಹಕ್ಕು ಎಂಬುದನ್ನು ನಿರ್ಧರಿಸುತ್ತದೆ. ಈಗ ಕಾಂಗ್ರೆಸ್ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತದೆಯೇ? ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಂಗ್ರೆಸ್ ಕಸಿದುಕೊಳ್ಳುತ್ತಿದೆಯೇ? ಬಹುಸಂಖ್ಯಾತ ಹಿಂದೂಗಳು ಕಾಂಗ್ರೆಸ್ ಬಳಿಗೆ ಹೋಗಿ ಅವರ ಹಕ್ಕುಗಳನ್ನು ಕೇಳಬೇಕೇ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದರು.

300x250 AD

ಹಿಂದೂಗಳನ್ನು ವಿಭಜಿಸಿ ಸಮಾಜದಲ್ಲಿ ತಾರತಮ್ಯವನ್ನು ಹೆಚ್ಚಿಸುವ ಮೂಲಕ ದೇಶವನ್ನು ನಾಶಮಾಡಲು ಕಾಂಗ್ರೆಸ್ ಬಯಸುತ್ತಿದೆ. ಅವರು ದೇಶಕ್ಕೆ ಬಡತನ ಬಿಟ್ಟು ಬೇರೇನನ್ನೂ ಕೊಟ್ಟಿಲ್ಲ. ಕಾಂಗ್ರೆಸ್ ಅನ್ನು ಈಗ ಪಕ್ಷದ ಮೂಲ ಜನರು ನಡೆಸುತ್ತಿಲ್ಲ. ಆ ಪಕ್ಷದ ದೊಡ್ಡ ನಾಯಕರ ಬಾಯಿ ಮುಚ್ಚಿಸಲಾಗಿದೆ. ಅವರು ಏನನ್ನೂ ಮಾತನಾಡಲು ಧೈರ್ಯ ಮಾಡುತ್ತಿಲ್ಲ. ಕಾಂಗ್ರೆಸ್‌ ನಾಯಕತ್ವವನ್ನು ಹೊರಗುತ್ತಿಗೆ ನೀಡಲಾಗಿದೆ. ಕೆಲವರು ತೆರೆಮರೆಯಲ್ಲಿ ನಿಂತು ಪಕ್ಷವನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.

ಈ ಜನರು ಭಾರತ ವಿರೋಧಿ ಶಕ್ತಿಗಳೊಂದಿಗೆ ಶಾಮೀಲಾಗಿದ್ದಾರೆ. ಯಾವುದೇ ಬೆಲೆ ತೆತ್ತಾದರೂ ಹಿಂದೂಗಳನ್ನು ವಿಭಜಿಸುವ ಮೂಲಕ ದೇಶವನ್ನು ನಾಶ ಮಾಡಲು ಕಾಂಗ್ರೆಸ್ ಬಯಸುತ್ತಿದೆ. ಕಾಂಗ್ರೆಸ್ ಬಡವರನ್ನು ಒಡೆಯಲು ಬಯಸುತ್ತಿದೆ. ಅವರು ಅಧಿಕಾರ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಅವರಿಗೆ ಇಲ್ಲಿಗೆ ಬಂದು ನಿಮ್ಮ ಜೊತೆಗೆ ಮಾತನಾಡಲು ಸಮಯವಿಲ್ಲ. ಆದರೆ, ತಮ್ಮ ಸರ್ಕಾರವನ್ನು ಉಳಿಕೊಳ್ಳಲು ಮಾತ್ರ ತಮ್ಮನ್ನು ತಾವು ಮುಡಿಪಾಗಿಟ್ಟುಕೊಂಡಿದ್ದಾರೆ ಎಂದು ಹೇಳಿದ ಅವರು, ಯಾವುದೇ ಭ್ರಷ್ಟರು ಮೋದಿಯವರ ಕಣ್ಣಿಗೆ ಬೀಳಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಅವರು ಇಲ್ಲಿಗೆ ಬರಲು ಹೆದರುತ್ತಾರೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

Share This
300x250 AD
300x250 AD
300x250 AD
Back to top