Slide
Slide
Slide
previous arrow
next arrow

ಸಿದ್ದರಾಮಯ್ಯ ಸರ್ಕಾರದ ಮೇಲೆ ಹೆಚ್ಚಿದ ಒತ್ತಡ! ಬಿಹಾರ ನಂತರ ರಾಜ್ಯದಲ್ಲೂ ‘ಜಾತಿಗಣತಿ’ ವರದಿ ಬಹಿರಂಗಕ್ಕೆ ಕೂಗು

300x250 AD

ಕಾರವಾರ: ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡಗಳು ಹೆಚ್ಚಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆಸಲಾದ ಸಾಮಾಜಿಕ- ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರಿದಿಯನ್ನು ಬಿಡುಗಡೆ ಮಾಡಬೇಕು ಎಂಬ ಕೂಗು ಕೇಳಿಬಂದಿದೆ.

2015ರಲ್ಲಿ ಆಗಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ 170 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿತ್ತು. ಅದರ ವರದಿ ಇನ್ನೂ ಬಹಿರಂಗವಾಗಿಲ್ಲ. ಆಗಿನ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಹೆಚ್.ಕಾಂತರಾಜ್ ಅವರ ನೇತೃತ್ವದಲ್ಲಿ ಜಾತಿಗಣತಿ ನಡೆಸಲಾಗಿತ್ತು. ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಬಲವಾಗಿರುವ ಲಿಂಗಾಯತ ಹಾಗೂ ಒಕ್ಕಲಿಗರ ಸಂಖ್ಯೆ ಅಂದುಕೊAಡಷ್ಟು ಹೆಚ್ಚಾಗಿರದ ಹಿನ್ನೆಲೆಯಲ್ಲಿ ಈವರೆಗೂ ಆಡಳಿತ ನಡೆಸಿದ ಮುಖ್ಯಮಂತ್ರಿಗಳು ವರದಿ ಬಿಡುಗಡೆಗೆ ಆಸಕ್ತಿ ತೋರುತ್ತಿಲ್ಲ ಎಂದು ಕೆಲವು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ. ಇದರಿಂದ ಜಾತಿ ಗಣತಿ ಒಪ್ಪಿಕೊಳದೆ ಅಥವಾ ಬಹಿರಂಗಪಡಿಸದೆ ರಾಜಕೀಯ ಪಕ್ಷಗಳು ಹಲವು ವರ್ಷಗಳಿಂದ ರಾಜಕೀಯ ಆಟದಲ್ಲಿ ತೊಡಗಿವೆ.

300x250 AD

ಜಾತಿ ಗಣತಿ ವರದಿ ಬಿಡುಗಡೆ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಅಭಿನಂದಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, ಕರ್ನಾಟಕದಲ್ಲೂ ಬಹುದಿನಗಳ ಬೇಡಿಕೆಯಾಗಿರುವ ಜಾತಿಗಣತಿ ಮಾಹಿತಿಯನ್ನು ಆದಷ್ಟು ಬೇಗ ಬಹಿರಂಗಗೊಳಿಸುವ0ತೆ ತಮ್ಮ ಪಕ್ಷದ ಸರ್ಕಾರವನ್ನು ಒತ್ತಾಯಿಸಿದರು. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, ರಾಜ್ಯ ಮತ್ತು ದೇಶ ಎರಡರಲ್ಲೂ ಜಾತಿ ಗಣತಿ ನಡೆಯಬೇಕು ಮತ್ತು ಅದರ ಆಧಾರದ ಮೇಲೆ ಜನಸಂಖ್ಯಾ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂಬುದು ರಾಹುಲ್ ಗಾಂಧಿಯವರ ಬಹುದಿನಗಳ ಬಯಕೆಯಾಗಿದೆ. ಅದು ಫಲಪ್ರದವಾಗಬೇಕಾದರೆ ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸಬೇಕು. ಒಂದುವೇಳೆ ಆ ವರದಿಯಲ್ಲಿನ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಿ ಅನುಷ್ಠಾನಗೊಳಿಸಬೇಕಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಮುಂದಿನ ತಿಂಗಳೊಳಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿರುವುದಾಗಿ ತಿಳಿಸಿದರು.ತಾಂತ್ರಿಕ ಸಮಸ್ಯೆ ಇತ್ತು, ಈ ಹಿಂದೆ ಸಿದ್ದವಾಗಿದ್ದ ವರದಿಗೆ ಸದಸ್ಯ ಕಾರ್ಯದರ್ಶಿಗಳ ಸಹಿ ಇರಲಿಲ್ಲ. ಈಗ ವರದಿ ನಮ್ಮ ಮುಂದಿದ್ದು, ಅಂತಿಮಗೊಳಿಸುತ್ತಿದ್ದೇವೆ, ಬಹುಶಃ ಮುಂದಿನ ತಿಂಗಳು ಸರಕಾರಕ್ಕೆ ಸಲ್ಲಿಸುತ್ತೇವೆ ಎಂದು ಹೇಳಿದರು. ಮತ್ತೊಂದೆಡೆ ಬಿಹಾರ ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇದೊಂದು ಉತ್ತಮ ಬೆಳವಣಿಗೆಯಾಗಿದ್ದು, ರಾಜ್ಯದಲ್ಲೂ ಇದೇ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ತಮ್ಮ ಆಶಯವಾಗಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದರು.

Share This
300x250 AD
300x250 AD
300x250 AD
Back to top