ಯಲ್ಲಾಪುರ: ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2022-23ನೇ ಸಾಲಿನ ಉತ್ತಮ ಕಾರ್ಯನಿರ್ವಹಣೆ ಮತ್ತು ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ತಾಲೂಕಿನ ಕುಂದರಗಿ ಗ್ರಾ.ಪಂ.ಕ್ಕೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.
ಅ.02 ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೇಟ್ ಹಾಲಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರವಿ ಪಟಗಾರ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಪಂಚಾಯತ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್, ಗ್ರಾಮೀಣಾಭಿವೃದ್ಧಿ ಮತ್ತು ಗ್ರಾ.ಪಂ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಸರಕಾರ ರಾಜ್ಯದ 233 ಗ್ರಾಮ ಪಂಚಾಯತ್ಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ನೀಡಿದೆ.
ಪಿ.ಡಿ.ಓ ರವಿ ಪಟಗಾರ ಜೊತೆಯಲ್ಲಿ ನಿಕಟಪೂರ್ವ ಗ್ರಾ.ಪಂ ಅಧ್ಯಕ್ಷೆ ದೀಪಾ ಸಿದ್ದಿ, ನಿಕಟಪೂರ್ವ ಉಪಾಧ್ಯಕ್ಷ ಧಾಕ್ಲು ಪಾಟೀಲ್, ಕಾರ್ಯದರ್ಶಿ ಶಂಕರ ನಾಯ್ಕ ಹಾಗೂ ಸಿಬ್ಬಂದಿ ದೇವರಾಯ ಶೇಟ್ ಪಾಲ್ಗೊಂಡು ಪ್ರಶಸ್ತಿ ಸ್ವೀಕರಿಸಿದರು.