ಕುಮಟಾ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹೆಗಡೆಯ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.
ನಗರದ ಮಾಲದೇವಿ ಮೈದಾನದಲ್ಲಿ ನಡೆದ 6ರಿಂದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕುಮಟಾ ತಾಲೂಕಿನ ಹೆಗಡೆಯ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿನಿ ಕಾವ್ಯ ಗೌಡ ಅವರು ಹರ್ಲ್ಡಲ್ಸ್ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೇ ಈ ಶಾಲೆಯ ಕಬ್ಬಡ್ಡಿ ತಂಡ ವಿಭಾಗ ಮಟ್ಟದ ಕ್ರೀಡಾಕೂಟಕ್ಕೂ ಆಯ್ಕೆಯಾಗುವ ಮೂಲಕ ಉತ್ತಮ ಕ್ರೀಡಾ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಮುಂದಿನ ರಾಜ್ಯ ಹಾಗೂ ವಿಭಾಗ ಮಟ್ಟದಲ್ಲೂ ಅತ್ಯುತ್ತಮ ಸಾಧನೆ ಮಾಡಲಿ ಎಂದು ಶಾಲಾ ಮುಖ್ಯಾಧ್ಯಾಪಕಿ ಮಂಗಲ ಹೆಬ್ಬಾರ ಹಾರೈಸಿದ್ದಾರೆ.
ಈ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕಿ ಶ್ಯಾಮಲಾ ಪಟಗಾರ ತರಬೇತಿ ನೀಡಿದ್ದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಗೋಪಾಲಕೃಷ್ಣ ಪುರಾಣಿಕ, ಭಾಗ್ಯಲಕ್ಷಿ ನಾಯಕ, ನಯನ ಪಟಗಾರ, ಎಸ್ಡಿಎಂಸಿ ಉಪಾಧ್ಯಕ್ಷೆ ಯೋಗೀತಾ ನಾಯ್ಕ ಇದ್ದರು.