ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ನಂತರ ಬಿಜೆಪಿಯಲ್ಲಿನ ಕೆಲ ಶಾಸಕರು ತಮ್ಮ ಪಕ್ಷವನ್ನ ತೊರೆದು ಕಾಂಗ್ರೆಸ್ ನತ್ತ ಮುಖ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಶಿವರಾಮ್ ಹೆಬ್ಬಾರ್ ಸೇರಿ ಹಲವು ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಇನ್ನೇನು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಚರ್ಚೆ ಸಹ ನಡೆದಿದ್ದು ಸದ್ಯ ಎಲ್ಲವೂ ತಣ್ಣಗಾಗಿದೆ.
ಜೆಡಿಎಸ್ ಬಿಜೆಪಿ ಮೈತ್ರಿ ಹೊರ ಬಿದ್ದ ನಂತರ ಈ ಚರ್ಚೆ ಮತ್ತೆ ಶುರವಾಗಿದ್ದು ಲೋಕಸಭಾ ಚುನಾವಣೆ ವೇಳೆಗೆ ತಮ್ಮ ಮಾತೃ ಪಕ್ಷಕ್ಕೆ ಕೆಲ ಶಾಸಕರು ಹೋಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ. ಮಾಜಿ ಸಚಿವ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಸಹ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದ್ದು ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈ ಬಗ್ಗೆ ಸ್ಪಷ್ಟ ಉತ್ತರ ಸಿಗಲಿದೆ.