ಹಳಿಯಾಳ: ತಾಲೂಕಿನಲ್ಲಿ ಬರಗಾಲ ಘೋಷಣೆಯಾಗಿದ್ದು, ರೈತರಿಗೆ ಉದ್ಯೋಗ ಒದಗಿಸುವ ದೃಷ್ಟಿಯಿಂದ ಎಲ್ಲ ಗ್ರಾಮ ಪಂಚಾಯತಿಗಳಲ್ಲೂ ರೈತರ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಮೊದಲಗೇರಾ ಗ್ರಾಮ ಪಂಚಾಯತಿಯ ರಾಮಾಪುರದಲ್ಲಿ ಯೋಜನೆಯಿಂದ ವಂಚಿತರಾದ ರೈತರನ್ನು ಗುರುತಿಸಿ ಅವರಿಗೆ ಉದ್ಯೋಗ ಚೀಟಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರಾದ ಎನ್.ಕುಮಾರ ಅವರು ಯೋಜನೆಯ ಕುರಿತು ಮಾಹಿತಿ ನೀಡಿದರು. ತಾಂತ್ರಿಕ ಸಂಯೋಜಕರಾದ ಮಹೇಶ್ ಪಟಗಾರ ಮಾತನಾಡಿ, ಯೋಜನೆಯಡಿ ತೆಗೆದುಕೊಳ್ಳಬಹುದಾದ ವೈಯಕ್ತಿಕ ಕಾಮಗಾರಿಗಳ ಬಗ್ಗೆ ತಿಳಿಸಿದರು. ನಂತರ ಎಂಐಎಸ್ ಸಂಯೋಜಕ ಮಂಜುನಾಥ ಉದ್ಯೋಗ ಚೀಟಿಯ ಪ್ರಯೋಜನಗಳ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಐಇಸಿ ಸಂಯೋಜಕರು, ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.