ಕಾರವಾರ: ಸಾರ್ವಜನಿಕ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುವುದು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ಸರ್ಕಾರದ ನಿರ್ದೇಶನನಿದೆ.
ಅದರಂತೆ ಅ.10ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮವನ್ನು ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.