ಕಾರವಾರ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸ0ಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು Climate Resilience and Sustainable Development ವಿಷಯದ ಕುರಿತಂತೆ ನ.22ರಿಂದ 24ರವರೆಗೆ ರಾಷ್ಟೀಯ ಸಮ್ಮೇಳನವನ್ನು ಬೆಂಗಳೂರಿನ ಅಕಾಡೆಮಿಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮ್ಮೇಳನದಲ್ಲಿ ಪೇಪರ್ ಪ್ರೆಸೆಂಟೇಶನ್ ಮತ್ತು ವರ್ಕಿಂಗ್ ಮಾಡೆಲ್ ಸಹ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಪೇಪರ್ ಮತ್ತು ಮಾಡೆಲ್ಗಳಿಗೆ ಬಹುಮಾನವನ್ನು ನೀಡಲಾಗುವುದು. ಸಮ್ಮೇಳನದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಸಂಶೋಧಕ ವಿಜ್ಞಾನಿಗಳು, ಪ್ರಾಧ್ಯಾಪಕರು, ಉಪನ್ಯಾಸಕರು ಭಾಗವಹಿಸಬಹುದು. ನಿಗದಿತ ಶುಲ್ಕವನ್ನು ಪಾವತಿಸಿ ನ.15ರೊಳಗಾಗಿ https://forms.gle/VBZdYHcawb4u9Jb9 ಮೂಲಕ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29721550, +919845258894 ಅಥವಾ www.kstacademy.inಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಎ.ಎಂ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.