Slide
Slide
Slide
previous arrow
next arrow

ಆತ್ಮಹತ್ಯೆ ಯತ್ನಿಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

300x250 AD

ಭಟ್ಕಳ: ತಾಲೂಕಿನ ತಲಾಂದ ಗ್ರಾಮದಲ್ಲಿ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡ ಯುವಕನೋರ್ವ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ತಲಾಂದ ನಿವಾಸಿ ಮಂಜುನಾಥ ಗೊಂಡ ಮೃತ ಯುವಕ. ಈತ ಅ.5ರಂದು ರಾತ್ರಿ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯ ಅಂಗಳದಲ್ಲಿ ಸಾರಾಯಿ ಕುಡಿದು ತನ್ನ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಾಕಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾನೆ. ಬಳಿಕ ಅಲ್ಲಿನ ಸ್ಥಳೀಯರು ತಕ್ಷಣ ಬೆಂಕಿ ನಂದಿಸಿ ಭಟ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಎಂದು ಸಾವನ್ನಪ್ಪಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top