ಕಾರವಾರ: ರೇಷ್ಮೆ ಇಲಾಖೆಯಿಂದ 2022-23ನೇ ಸಾಲಿನ ರೇಷ್ಮೆ ಕೃಷಿಯಲ್ಲಿ ಉತ್ತಮ ಪ್ರಗತಿ ಸಾಧಿಸಿರುವ ಮಹಿಳಾ ಮತ್ತು ಪುರುಷ ಬೆಳೆಗಾರರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರು ಕನಿಷ್ಟ 1 ಎಕರೆ ಹಿಪ್ಪು ನೇರಳೆ ತೋಟ ಹಾಗೂ ಪ್ರತ್ಯೇಕ ರೇಷ್ಮೆ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗಳಿಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆಜಿಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ, ಚಾಕಿ ಖರೀದಿಸಿರುವ ಬಗ್ಗೆ, ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿ, ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿಗಳನ್ನು ದಾಖಲಾತಿಗಳೊಂದಿಗೆ ಒದಗಿಸಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅ.17 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಎಂದು ರೇಷ್ಮೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.