ದಾಂಡೇಲಿ: ಶಿರಸಿಯಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ಪ್ರೌಢಶಾಲಾ ವಿಭಾಗದ ಬೆಳಗಾವಿ ವಿಭಾಗ ಮಟ್ಟದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಇಲ್ಲಿನ ಜೆವಿಡಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ನವನೀತ್ ನವೀನ್ ಕಾಮತ್ ಪ್ರಥಮ ಮತ್ತು ಯುವರಾಜ ಹೊಸಮಠ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟಕ್ಕೆ ಜಿಲ್ಲೆಯಿಂದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಅವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನಗರದ ಜೆವಿಡಿ ಪ್ರೌಢಶಾಲೆಯಿಂದ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಅತ್ಯುತ್ತಮ ಪ್ರದರ್ಶನವನ್ನು ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಇಬ್ಬರು ಕ್ರೀಡಾಪಟುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿವೇಕ್ ಕವರಿ, ತಾಲೂಕು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ, ಜನತಾ ವಿದ್ಯಾಲಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಂ.ಎಸ್.ಇಟಗಿ, ಪ್ರೌಢಶಾಲೆಯ ಮುಖ್ಯೋಪಾಧ್ಯಯಿನಿ ಭಾರತಿ ಗೌಡ, ದೈಹಿಕ ಶಿಕ್ಷಣ ಶಿಕ್ಷಕಿ ವೀಣಾ ಪ್ರಕಾಶ್ ಮೆಹತಾ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಸಿಯೇಶನ್ ಪದಾಧಿಕಾರಿಗಳು ಹಾಗೂ ನಗರದ ಗಣ್ಯರನೇಕರು ಅಭಿನಂದಿಸಿದ್ದಾರೆ.