Slide
Slide
Slide
previous arrow
next arrow

ಶಾಲೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ; ಶಾಲಾ ಕಟ್ಟಡ ಪರಿಶೀಲನೆ

300x250 AD

ದಾಂಡೇಲಿ: ನಗರದ ಹಳೆನಗರ ಸಭೆಯ ಕಟ್ಟಡದಲ್ಲಿರುವ ಸೋರಗಾವಿ ಸಿಬಿಎಸ್ಸಿ ಶಾಲೆಯ ಕಟ್ಟಡ ದುಸ್ಥಿತಿಯಲ್ಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಡಿ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಲೋಕಾಯುಕ್ತ ಎಸ್.ಪಿ ಕುಮಾರಚಂದ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗುರುವಾರ ಶಾಲೆಗೆ ಭೇಟಿ ನೀಡಿ ಕಟ್ಟಡದ ಸ್ಥಿತಿಯನ್ನು ಪರಿಶೀಲಿಸಿದೆ.

ಈ ಕಟ್ಟಡ ಬಹಳ ಹಳೆಯ ಕಟ್ಟಡವಾಗಿದ್ದು, ಏನಾದರೂ ಅವಘಡ ನಡೆದಲ್ಲಿ 900 ಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿರುವುದರಿಂದ ಬಹುದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ವಲಯದಿಂದ ಲೋಕಾಯುಕ್ತ ಇಲಾಖೆಗೆ ದೂರನ್ನು ನೀಡಲಾಗಿತ್ತು. ಅದರಂತೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ, ಲೋಕಾಯುಕ್ತ ಸಿಪಿಐ ವಿನಾಯಕ ಬಿಲ್ಲವ ಹಾಗೂ ಮೊದಲಾದ ಅಧಿಕಾರಿಗಳು ಮತ್ತು ಲೋಕಾಯುಕ್ತ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

300x250 AD

ಆನಂತರ ಸ್ಥಳೀಯರಾದ ಗೌರೀಶ್ ಬಾಬ್ರೇಕರ್ ಅವರ ಮನವಿಯ ಮೇರೆಗೆ ಲೋಕಾಯುಕ್ತ ಎಸ್ ಪಿ ಕುಮಾರಚಂದ್ ಅವರು ನಗರದ ಬಸ್ ನಿಲ್ದಾಣದ ಮುಂಭಾಗದ ಜೆ.ಎನ್ ರಸ್ತೆಯ ಬದಿಯಲ್ಲಿ ಅನಾಹುತಕ್ಕೆ ಕಾರಣವಾಗಿದ್ದ ವಿದ್ಯುತ್ ಕಂಬವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದೀಪಕ್ ನಾಯಕ ಅವರು ನಗರಸಭೆಯ ಸಹಕಾರದಲ್ಲಿ ಕಂಬವನ್ನು ಸ್ವಲ್ಪ ಮುಂದಕ್ಕೆ ಸ್ಥಳಾಂತರಿಸುವುದಾಗಿ ಹೇಳಿದರು.

Share This
300x250 AD
300x250 AD
300x250 AD
Back to top