Slide
Slide
Slide
previous arrow
next arrow

ಕಬ್ಬು ಸಾಗಾಟದ ವಾಹನಗಳಿಗೆ ರೇಡಿಯಮ್ ಪ್ರತಿಫಲಕ ಕಡ್ಡಾಯ: ಎಸ್‌ಪಿ

300x250 AD

ಹಳಿಯಾಳ: ಇನ್ನು ಕೆಲವೇ ದಿನಗಳಲ್ಲಿ ಇಲ್ಲಿನ ಸಕ್ಕರೆ ಕಾರ್ಖಾನೆ ಕಾರ್ಯಾರಂಭ ಮಾಡಲಿದೆ. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಆಗದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಬ್ಬು ಸಾಗಿಸುವ ಎಲ್ಲ ವಾಹನಗಳಿಗೆ ಹಿಂಬದಿ ಕಡ್ಡಾಯವಾಗಿ ರೇಡಿಯಮ್ ಪ್ರತಿಫಲಕ ಹಚ್ಚಲೇಬೇಕೆಂದು ಕಾರ್ಖಾನೆಗೆ ನೋಟಿಸ್ ಮೂಲಕ ತಿಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಹೇಳಿದರು.

ಪಟ್ಟಣದ ಪೋಲಿಸ್ ಠಾಣೆಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಗರದಲ್ಲಿನ ಎಲ್ಲ ಸಿಸಿಟಿವಿ ಕ್ಯಾಮೆರಾಗಳು ಮತ್ತೆ ಕಾರ್ಯಾಚರಣೆ ಮಾಡುವ ನಿಟ್ಟಿನಲ್ಲಿ ಪುರಸಭೆ ಆಡಳಿತಾಧಿಕಾರಿ ಜಯಲಕ್ಷ್ಮಿ ರಾಯಕೋಡ ಅವರೊಂದಿಗೆ ಮಾತನಾಡಲಾಗುವುದು. ಸದ್ಯದಲ್ಲೇ ಕ್ಯಾಮೆರಾಗಳ ದುರಸ್ತಿ ಕಾರ್ಯ ನಡೆಯಲಿದೆ ಎಂದು ಭರವಸೆ ನೀಡಿದರು.

ಪಟ್ಟಣದ ಶ್ರೀಛತ್ರಪತಿ ಶಿವಾಜಿ ವೃತ್ತ, ವನಶ್ರೀ ವೃತ್ತದಲ್ಲಿ ಹೈಮಾಸ್ಟ್ ದೀಪಗಳು ಇರಬೇಕಾಗಿರುವ ಅವಶ್ಯಕತೆಯ ಬಗ್ಗೆ ಸಂಬAಧಿಸಿದ ಇಲಾಖೆಯೊಂದಿಗೆ ಮಾತನಾಡಲಾಗುವುದು. ಈ ವೃತ್ತಗಳಲ್ಲಿ ಸಂಚಾರ ದಟ್ಟಣೆ ಇರುವುದರಿಂದ ಹೆಚ್ಚಿನ ಬೆಳಕಿನ ಅವಶ್ಯಕತೆ ಇದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಪಟ್ಟಣದಲ್ಲಿ ಎಲ್ಲೆಂದರಲ್ಲಿ ಫುಟ್ ಪಾತ್ ಪ್ರದೇಶಗಳಲ್ಲಿ ಬೇಕಾಬಿಟ್ಟಿ ಪಾರ್ಕಿಂಗ್ ಮಾಡಿರುವ ವಾಹನಗಳನ್ನು ತೆರವುಗೊಳಿಸಬೇಕು. ಇಲ್ಲವೇ ಅಂತಹವರಿಗೆ ನೋಟಿಸ್ ನೀಡಿ ವಾಹನ ಜಪ್ತಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

300x250 AD

ಶಾಲಾ ಪ್ರದೇಶಗಳ ಸಮೀಪದ ರಸ್ತೆಗಳಲ್ಲಿ ಝೀಬ್ರಾ ಕ್ರಾಸಿಂಗ್ ಲೈನ್, ಶಾಲಾ ವಲಯ ಬೋರ್ಡ್ ಕಡ್ಡಾಯವಾಗಿ ಹಾಕಲು ಕೂಡ ಸಂಬAಧಿಸಿದವರೊAದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಎಸ್ಪಿ ಸೂಚಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಸುರೇಶ ಶಿಂಘೆ, ಪಿಎಸ್‌ಐ ವಿನೋದ ರೆಡ್ಡಿ ಇದ್ದರು.

Share This
300x250 AD
300x250 AD
300x250 AD
Back to top