ಸಿದ್ದಾಪುರ: ಹುಸೂರಿನ ಜನತೆಯ ಕೆರೆ ಪುನಶ್ಚೇತನ ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮ ಪಂಚಾಯ್ತಿ ಹಲಗೇರಿ ಹಾಗೂ ಕೆರೆ ಅಭಿವೃದ್ಧಿ ಸಮಿತಿ ಹುಸೂರ ಸಹಭಾಗಿತ್ವದಲ್ಲಿ ನಮ್ಮೂರು-ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಪುನಶ್ಚೇತನಗೊಳಿಸಿದ ತಾಲೂಕಿನ ಹುಸೂರಿನ ಹೆಗ್ಗೆರೆ ಕೆರೆಗೆ ಬಾಗಿನ ಅರ್ಪಿಸಿ ನಾಮಫಲಕ ಅನಾವರಣಗೊಳಿಸಿ ಮಾತನಾಡಿ, ಸರ್ಕಾರ ಒಂದನ್ನು ಅವಲಂಭಿಸದೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದಿಂದ ಹುಸೂರಿನ ಜನ ಮಾಡಿರುವ ಕಾರ್ಯ ಇತರರಿಗೆ ಪ್ರೇರಣೆಯಾಗಿದೆ. ಹಸಿರುಕ್ರಾಂತಿಗೆ ಶಕ್ತಿ ನೀಡಬೇಕಾದರೆ ಕೆರೆಗಳ ಪುನಶ್ಚೇತನವಾಗಬೇಕು ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಕೆರೆ ಹಸ್ತಾಂತರಿಸಿದರು. ಕೆರೆ ಅಭಿವೃದ್ಧಿ ಅಧ್ಯಕ್ಷ ನಾರಾಯಣ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ವಿಜಯಾ ಸಂಗಡಿಗರು ಪ್ರಾರ್ಥಿಸಿದರು. ಯೋಜನೆಯ ಯೋಜನಾಧಿಕಾರಿ ಪ್ರಭಾಕರ ನಾಯ್ಕ ಸ್ವಾಗತಿಸಿದರು.
ಈ ವೇಳೆ ಹಲಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮೋಹಿನಿ ನಾಯ್ಕ, ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ವಲಯ ಅರಣ್ಯಾಧಿಕಾರಿ ಬಸವರಾಜ ಬೋಚಳ್ಳಿ, ತಾಲೂಕಾ ಪಂಚಾಯ್ತಿ ಮಾಜಿ ಸದಸ್ಯ ವಸಂತ ನಾಯ್ಕ, ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಸುಭಾಷ ನಾಯ್ಕ, ವೇದಿಕೆ ಸದಸ್ಯ ರಮೇಶ ಹಾರ್ಸಿಮನೆ, ಗ್ರಾಮ ಪಂಚಾಯ್ತಿ ಸದಸ್ಯರಾದ ಎಂ.ಪಿ.ನಾಯ್ಕ, ಸುಶೀಲಾ ನಾಯ್ಕ, ಪಿಡಿಓ ಮಹಮ್ಮದ್ ರಿಯಾಜ್, ಹುಸೂರ ಊರ ಕಮಿಟಿ ಅಧ್ಯಕ್ಷ ವಸಂತ ಕೆ ನಾಯ್ಕ, ನಿವೃತ್ತ ಸರ್ಕಾರಿ ಅಭಿಯೋಜಕ ಬಿ.ಜಿ.ನಾಯ್ಕ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ಉಪಸ್ಥಿತರಿದ್ದರು.