ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪಾವನಿ ಮೋಹನ ನಾಯ್ಕ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಇವರು ಗದಗ ತಾಲೂಕಿನ ಬಸವೇಶ್ವರ ಶಾಲೆಯಲ್ಲಿ ಆಯೋಜಿಸಿದ್ದ ವಿಭಾಗಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆ 2023-24 ರ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾಳೆ. ಪುರಸ್ಕಾರವು ಪ್ರಶಸ್ತಿ ಪತ್ರ ಹಾಗೂ ಚಿನ್ನದ ಪದಕಗಳನ್ನೊಳಗೊಂಡಿದೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕಿಯರು, ಶಿಕ್ಷಕ ವೃಂದ, ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ, ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.