ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅ.30ರಿಂದ ಡಿಜಿಟಲ್ ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ತರಬೇತಿ ಆರಂಭವಾಗಿ ನ.28ರವರೆಗೆ ನಡೆಯಲಿದೆ.
ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ- ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18ರಿಂದ 45 ವರ್ಷಗಳು. ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು, ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು.
ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ- 581 343ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ದೂರವಾಣಿ ಸಂಖ್ಯೆ: Tel:+9108386220530, Tel:+919538281989,Tel:+919916783825,Tel:+918880444612,Tel:+919620962004, Tel:+919449860007, ಕ್ಕೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ಪೋರ್ಟ್ ಸೈಜ್ ಫೋಟೋ, ರೇಶನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಪಾನ್ ಕಾರ್ಡ್ಗಳ 1 ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬೇಕೆಂದು ಕೋರಲಾಗಿದೆ.