ಕಾರವಾರ: ಅ.29ರಂದು ಬೆಳಗ್ಗೆ 10.30ರಿಂದ 12.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 4.30ರವರೆಗೆ ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ಕುರಿತಂತೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮುಂಚಿತವಾಗಿ ಹಾಜರಾಗಬೇಕಿರುವುದರಿಂದ ಎಲ್ಲಾ ತಾಲೂಕು ಕೇಂದ್ರಗಳಿಂದ ಪರೀಕ್ಷಾ ಕೇಂದ್ರದ ಪ್ರದೇಶಗಳಿಗೆ ತೆರಳಲು ಮತ್ತು ವಾಪಸ್ ಬರಲು ಅನುಕೂಲವಾಗುವಂತೆ ಹೆಚ್ಚುವರಿ ಬಸ್ ಸೌಲಭ್ಯವನ್ನು ಒದಗಿಸುವಂತೆ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದ್ದಾರೆ.
ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ವಿವಿಧ ಜಿಲ್ಲೆಗಳಿಂದ ಒಟ್ಟು 6,956 ಅಭ್ಯರ್ಥಿಗಳು ಪರೀಕ್ಷೆಗಳು ಹಾಜರಾಗಲಿದ್ದು, ಬಸ್ ಅನಾನುಕೂಲತೆಯಿಂದ ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಪರೀಕ್ಷೆಯಿಂದ ವಂಚಿತರಾಗದಂತೆ ನಿಗದಿತ ಸಮಯಕ್ಕೆ ಸರಿಯಾಗಿ ಸುವ್ಯವಸ್ಥಿತ ರೀತಿಯಲ್ಲಿ ಬಸ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ.