ಹಳಿಯಾಳ: ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣವನ್ನು ನಮ್ಮ ದೇಶ ಮಾತ್ರವಲ್ಲ, ಜಗತ್ತಿನ ಅನೇಕ ರಾಷ್ಟ್ರಗಳು ಒಪ್ಪಿವೆ. ಈ ಮಹಾಕಾವ್ಯ ಜಗತ್ತಿನಲ್ಲಿ ಇಂದಿಗೂ ಮಾನವೀಯತೆ, ಧರ್ಮ- ಸಂಸ್ಕಾರ ನೆಲೆಸಲು ಕಾರಣವಾಗಿದೆ ಎಂದು ತಹಶೀಲ್ದಾರ್ ಜಿ.ಕೆ.ರತ್ನಾಕರ್ ಹೇಳಿದರು.
ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ತಾಲೂಕಿನ ಶ್ರೀವಾಲ್ಮೀಕಿ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೌನೇಶ್ವರ ಬಾಲಿಕಾರ ವಾಲ್ಮೀಕಿ ಮಹರ್ಷಿಗಳ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತೆ, ಹೆಸ್ಕಾಂ ಸಹಾಯಕ ಎಂಜಿನಿಯರ್ ರವೀಂದ್ರ ಮೇಟಗುಡ್, ಪುರಸಭೆ ಮುಖ್ಯಾಧಿಕಾರಿ ಅಶೋಕ್ ಸಾಳೇನವರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ ಪವಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.