ಕಾರವಾರ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ (ನೇರಸಾಲ) ಯೋಜನೆ, ಉದ್ಯಮಶೀಲತಾ ಯೋಜನೆ, ಉದ್ಯಮಶೀಲತಾ ಯೋಜನೆ (ಸರಕು ಸಾಗಾಣಿಕೆ/ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ) ಭೂ ಒಡೆತನ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಸೇವಾ ಸಿಂಧು ಪೋರ್ಟಲ್, ಕರ್ನಾಟಕ ಓನ್, ಬೆಂಗಳೂರು, ಒನ್, ಗ್ರಾಮ ಒನ್‌ಗಳ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾಪೇಕ್ಷಿಗಳು ನ.30 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: Tel:+9108382226514 / Tel:+91919480843047 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.