ಶಿರಸಿ: ಜಿಲ್ಲೆಯ ಬಹು ಜನರ ಬೇಡಿಕೆಯ ಈಡೇರಿಕೆಗಾಗಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಶಿರಸಿ ಫೋಟೊಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಷನ್‌ನಿಂದ ಬೆಂಬಲ ದೊರೆತಿದ್ದು, ಅಸೊಶಿಯೇಶನ್‌ನ ಅಧ್ಯಕ್ಷ ರಾಜು ಕಾನಸೂರು ಪಾದಯಾತ್ರೆಯಲ್ಲಿ ಪಾಲ್ಗೊಳುವ ಮೂಲಕ ಬೆಂಬಲ ಸೂಚಿಸಿದ್ದಾರೆ.
ನಂತರ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯ ಬಹುಜನರ ಬೇಡಿಕೆಯಾದ ಘಟ್ಟದ ಮೇಲೆ ಹಾಗೂ ಘಟ್ಟದ ಕೆಳಗೆ ಒಂದೊಂದು ಮೆಡಿಕಲ್ ಕಾಲೇಜು ಹಾಗೂ ಜಿಲ್ಲೆಯಲ್ಲಿ ಒಂದು ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಬಗ್ಗೆ ಆಗ್ರಹಿಸಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಶ್ಲಾಘನೀಯವಾಗಿದ್ದು, ಇದಕ್ಕೆ ಜಿಲ್ಲೆಯ ಜನರ ಸಂಪೂರ್ಣ ಬೆಂಬಲ ಬೇಕಾಗಿದೆ. ಇದು ಕೇವಲ ಅನಂತಮೂರ್ತಿ ಹೆಗಡೆಯವರ ಪಾದಯಾತ್ರೆಯಲ್ಲದೇ, ಜಿಲ್ಲೆಯ ಲಕ್ಷಾಂತರ ಜನರ ಬೇಡಿಕೆಯಾಗಿದೆ. ಇದು ನ.9 ರಂದು ಕಾರವಾರದ ಜಿಲ್ಲಾಧಿಕಾರಿ ಕಚೇರಿಗೆ ತಲುಪಲಿದ್ದು, ಅಂದು ನಡೆಯುವ ಪ್ರತಿಭಟನೆಗೆ ಜಿಲ್ಲೆಯ ಜನರು ಸಂಪೂರ್ಣ ಬೆಂಬಲ ಸೂಚಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಅನಂತಮೂರ್ತಿ ಹೆಗಡೆಯವರ ತಾಯಿ ಸೇರಿದಂತೆ ಅನೇಕ ಗಣ್ಯರು ಪಾದಯಾತ್ರೆಯಲ್ಲಿ ಇದ್ದರು.