ಕಾರವಾರ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ ಕರ್ನಾಟಕ ‘ಕ್ರೀಡಾ ಪೋಷಕ ಪ್ರಶಸ್ತಿ’ಯನ್ನು ನೀಡಲಾಗುವುದು.
ಯೋಜನೆಯ ಮಾರ್ಗಸೂಚಿಗಳಂತೆ ಅರ್ಹ ಕ್ರೀಡಾ ಪೋಷಕರು ಪ್ರಸ್ತಾವನೆಯನ್ನು ನ.24ರೊಳಗಾಗಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಕಚೇರಿಯಿಂದ ಪಡೆಯಬಹುದು.
ಅರ್ಹತೆ: ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಿರುತ್ತಾರೆ, ಕರ್ನಾಟಕ ನಿವಾಸಿಗಳಲ್ಲದ ಹಾಗೂ ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ತೊಡಗಿಸದೇ ಇರುವ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ, ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಬಗ್ಗೆ ಪೋಲಿಸ್ ವೆರಿಫಿಕೇಷನ್ ಕಡ್ಡಾಯವಾಗಿ ಸಲ್ಲಿಸತಕ್ಕದ್ದು. ಅರ್ಜಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.