ಪಾವಗಡ: ಕರ್ನಾಟಕ ಇತಿಹಾಸ ಅಕಾಡೆಮಿಯು ಪಾವಗಡದ ಎಸ್.ಎಸ್.ಕೆ.ಸಮುದಾಯ ಭವನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ 37ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಂಪಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ವಿ. ಪರಶಿವಮೂರ್ತಿ ಉದ್ಘಾಟಿಸಿದರು.
ಸಮ್ಮೇಳನದ ಸರ್ವಾಧ್ಯಕ್ಷರಾದ ಶ್ರೀಮತಿ ಹನುಮಾಕ್ಷಿ ಗೋಗಿ, ಮಾಜಿ ಸಚಿವ ವೆಂಕಟರಮಣಪ್ಪ, ಎಸ್.ಎಸ್.ಕೆ.ಸಂಘದ ಅಧ್ಯಕ್ಷರಾದ ಸಿ.ಎನ್. ಆನಂದ ರಾವ್, ರಾಯದುರ್ಗದ ಆರ್.ಸಿ.ಹುಲಿಕುಂಟೆಮೂರ್ತಿ, ಅಕಾಡೆಮಿಯ ಅಧ್ಯಕ್ಷರಾದ ಡಾ.ದೇವರಕೊಂಡಾರೆಡ್ಡಿ, ಕಾರ್ಯದರ್ಶಿ ಡಾ.ಕೆ.ಎಲ್. ರಾಜಶೇಖರ, ಡಾ.ವಿ.ಸಂಧ್ಯಾ, ಡಾ.ಬಾಲಕೃಷ್ಣ ಹೆಗಡೆ, ಮೊದಲಾದವರು ಉಪಸ್ಥಿತರಿದ್ದರು.