ಕಾರವಾರ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ರಾಷ್ಟ್ರೀಯಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.
ಭಾರತ ಸರ್ಕಾರದಿಂದ ಅಂಗೀಕೃತವಾಗಿರುವ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ/ ಪದಕ ವಿಜೇತರಾದಲ್ಲಿ ರೂ.50,000ಗಳ ನಗದು ಬಹುಮಾನವನ್ನು ನೀಡಲಾಗುವುದು. ಕರ್ನಾಟಕವನ್ನು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಅರ್ಹ ಕ್ರೀಡಾಪಟುಗಳು ಹಾಗೂ ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಿ ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಕ್ರೀಡಾಪಟುಗಳು ಅರ್ಜಿಯನ್ನು ನ.24ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: TEL:+919480886551ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.