ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಡಿಸೆಂಬರ್ ತಿಂಗಳಿನಲ್ಲಿ 30 ದಿನಗಳವರೆಗೆ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಟಿವಿ ರಿಪೇರಿ ತರಬೇತಿ ಹಮ್ಮಿಕೊಳ್ಳಲಾಗಿದೆ.
ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿOದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ: TEL:+919980510717,TEL:+918217236973,TEL:+919482188780, TEL:+919483485489 ನ್ನು ಸಂಪರ್ಕಿಸುವ0ತೆ ಪ್ರಕಟಣೆ ತಿಳಿಸಿದೆ.