ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ, ಕಾರವಾರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವು ಹಿಂದೂ ಪ್ರೌಢ ಶಾಲೆಯಲ್ಲಿ ಇಂದು ನಡೆಯಿತು.
ಕಾರ್ಯಕ್ರಮವನ್ನು ನಗರ ಸಭೆ ಸದಸ್ಯ ಪ್ರೇಮಾನಂದ ಆರ್. ಗುನಗಾ ಉದ್ಘಾಟಿಸಿ, ಮಾತನಾಡಿದ ಅವರು ಸರಕಾರವು ಮೊದಲಿಂದಲೂ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾಗಿತ್ತದೆ.ಇದು ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಕ್ಕಳು ಈ ಕಾರ್ಯಕ್ರಮದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದೆ ನಡೆಯಲಿರುವ ಜಿಲ್ಲಾ, ರಾಜ್ಯ, ರಾಷ್ಟçದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ತಮ್ಮ ಪೋಷಕರಿಗೆ , ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಲತಾ ಎಂ ನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಉದ್ದೇಶದಿಂದ ಪ್ರತಿ ವರ್ಷ ಪ್ರತಿಭಾ ಕಾರಂಜಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರದಲ್ಲಿ ವಿದ್ಯಾರ್ಥಿಗಳು ಸೋಲು ಗೆಲುವು ಎನ್ನದೆ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ ಇಂತಹ ಕಾರ್ಯಕ್ರಮದಿಂದ ವೇದಿಕೆಯ ಭಯ ಹೋಗಲಾಡಿಸಲು , ನಾಯಕತ್ವದ ಗುಣ, ಧೈರ್ಯ ಬೆಳೆಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ ಎನ್. ಎಫ್. ನರೋನ್ಹಾ, ತಾಲೂಕು ಪಂಚಾಯತ ಕಾರ್ಯನಿರ್ವಾಹಣಾಧಿಕಾರಿ ಪ್ರಿಯ ನಾಯ್ಕ , ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಹಾಸ್ ರಾಯ್ಕರ್, ಮಾದ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಜೈ ರಂಗನಾಥ್, ಉಪಾಧ್ಯಕ್ಷಿ ಸುಜಾತ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷ ಆರ್. ಪಿ ಗೌಡ, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ದಿನೇಶ್ ಗಾವಂಕರ್, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಸುಧಾಕರ ಗುನಗಿ, ಜಿಲ್ಲಾ ಸಂಘದ ಸಂಘಟಕ ಕಾರ್ಯದರ್ಶಿ ಸುಚೇತ ಕೋಡ್ಕಣಿ, ಬಾಲ ಮಂದಿರ ಮುಖ್ಯೋಪಾಧ್ಯಾಪಕಿ ಅಂಜಲಿ ಮನೆ, ಹಿಂದೂ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಪಕಿ ಅರುಣ್ ರಾಣಿ, ಸುಮತಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಪಕಿ ಮಮತಾ ಬಂಟ್ ಹಾಗೂ ತಾಲೂಕಿನ ಎಲ್ಲ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.