Slide
Slide
Slide
previous arrow
next arrow

ನ.18ಕ್ಕೆ ಕಾಂಗ್ರೆಸ್ ಬೂತ್ ಮಟ್ಟದ ಕಾರ್ಯಕರ್ತರ ಸಭೆ

300x250 AD

ಹೊನ್ನಾವರ: ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಕಿ ಬ್ಲಾಕ್ ಕಾಂಗ್ರೆಸ್ ನ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ ನ.18 ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಕೆಳಗಿನೂರಿನ ಒಕ್ಕಲಿಗರ ಸಭಾಭವನದಲ್ಲಿ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಮಂಕಾಳ್. ಎಸ್. ವೈದ್ಯ”ರವರು ಉಪಸ್ಥಿತರಿದ್ದು, ಮಂಕಿ ಬ್ಲಾಕ್ ವ್ಯಾಪ್ತಿಯ ಎಲ್ಲಾ ಬೂತ್ ನಲ್ಲಿನ ಕಾಂಗ್ರೆಸ್ ಕಾರ್ಯಕರ್ತರ “ಸಹಕಾರ ಸ್ಮರಣೆ” ಮಾಡಲಿದ್ದಾರೆ.

300x250 AD

ಕಳೆದ 2023 ವಿಧಾನಸಭಾ ಚುನಾವಣೆಯಲ್ಲಿ ಮಂಕಾಳ್ ವೈದ್ಯರ ಗೆಲುವಿಗಾಗಿ ಶ್ರಮಿಸಿದ ಮಂಕಿ ಬ್ಲಾಕ್ ವ್ಯಾಪ್ತಿಯ ಪ್ರತಿ ಬೂತ್ ಮಟ್ಟದ ಜನಜಾಗೃತಿ ಕಾರ್ಯಕ್ರಮದ ನೇತೃತ್ವ ವಹಿಸಿದ ಪಕ್ಷದ ಮುಖಂಡರು, ಬೂತ್ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಹಿರಿಯ ಕಿರಿಯ ಮುಖಂಡರು, ಕಾರ್ಯಕರ್ತರು ಅಂದಿನ ಸಭೆಯಲ್ಲಿ ಉಪಸ್ಥಿತರಿರಬೇಕೆಂದು ವಿನಂತಿ ಮಾಡಿಕೊಂಡಿದ್ದಾರೆ.

Share This
300x250 AD
300x250 AD
300x250 AD
Back to top