ಯಲ್ಲಾಪುರ: ಕಸ್ತೂರಿ ರಂಗನ್ ವರದಿ ವಿರೋಧಿ ಜಾಥದ ಮಾಹಿತಿ ಕಾರ್ಯಗಾರವನ್ನು ನ.19, ರವಿವಾರ, ಮುಂಜಾನೆ 10 ಗಂಟೆಗೆ ಯಲ್ಲಾಪುರ ವೆಂಕಟ್ರಮಣ ದೇವಸ್ಥಾನದ ಆವರಣದಲ್ಲಿ ಸಂಘಟಿಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾದ್ಯಂತ ಸೂಕ್ಷ್ಮ ಪ್ರದೇಶಕ್ಕೆ ಒಳಪಡುವ ವ್ಯಾಪ್ತಿಯ, ಸುಮಾರು ಒಂದು ಲಕ್ಷ ಕುಟುಂಬದಿಂದ ಆಕ್ಷೇಪಣಾ ಪತ್ರ ಸಲ್ಲಿಸುವ ಅಭಿಯಾನವನ್ನು ಹೋರಾಟಗಾರರ ವೇದಿಕೆಯು ಪ್ರಾರಂಭಿಸಿದ್ದು, ಮುಂದಿನ ಹೋರಾಟದ ರೂಪುರೇಷೆಯನ್ನು ಚರ್ಚಿಸಲು ಸಭೆ ಕರೆಯಲಾಗಿದ್ದು, ಆಸಕ್ತ ಅರಣ್ಯ ಅತಿಕ್ರಮಣದಾರರು ಆಗಮಿಸಬೇಕಾಗಿ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ಕೋರಿದ್ದಾರೆ.