ಭಟ್ಕಳ: ಭಟ್ಕಳ ತಾಲೂಕಿನ ಬೆಂಡೆಖಾನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಬ್ಬರು ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಆರೋಪ ಕೇಳಿ ಬಂದಿದೆ.
ಭಟ್ಕಳ ನಗರ ಠಾಣೆಯ ವ್ಯಾಪ್ತಿಯಲ್ಲಿಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಶ್ರೀಧರ ನಾಯ್ಕ
ವಿರುದ್ಧ ವಿದ್ಯಾರ್ಥಿನಿಯ ತಾಯಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ಶಾಲಾ ಮುಖ್ಯ ಶಿಕ್ಷಕನನ್ನು ಬಂಧಿಸಿದ ನಗರ ಠಾಣೆಯ ಪೊಲೀಸರು ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನಲ್ಲಿ 7 ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಸಿನ ಮಗಳು ಹಾಗೂ ಆಕೆಯ ಸ್ನೇಹಿತಿಗೆ ಕಳೆದ ಕೆಲ ದಿನಗಳಿಂದ ಆಗಾಗ ಮೈ ಮುಟ್ಟಿ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದವರು. ಈ ವಿಷಯವನ್ನು ಯಾರಿಗಾದರೂ ಹೇಳದರೆ ಫೇಲ್ ಮಾಡುವ ಬೆದರಿಕೆ ಹಾಕುತ್ತಿದ್ದರು ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ