ಅಂಕೋಲಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ನಿವಾಸಕ್ಕೆ ಆಗಮಿಸಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಬಿಜೆಪಿಯ ಕಾರ್ಯವೈಖರಿಗೆ ಬೇಸತ್ತು ಈ ಭಾರಿ ಜನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಬಹುತೇಕ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ಹಾಕಿಕೊಳ್ಳಲಿದ್ದು,ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ನಮ್ಮದೇ ಸರಕಾರ ಗದ್ದುಗೆ ಏರಲಿದೆ ಎಂದರು.
ನಮ್ಮ ಸರಕಾರ ಜನ ಸಾಮಾನ್ಯರನ್ನು ಸ್ಪಂದಿಸಿದ್ದು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳು ಸಹ ಸರಕಾರದ ಪ್ರಯೋಜನಗಳನ್ನು ಪಡೆಯುತ್ತಿದ್ದು ಕಾಂಗ್ರೆಸ್ ಪಕ್ಷ ಹಲವಾರು ಯೋಜನೆಗಳನ್ನು ನೀಡುವುದರ ಮೂಲಕ ಜನಸಾಮಾನ್ಯರ ಮನ ಗೆದ್ದಿದೆ ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ, ಉದ್ಯಮಿ ಸುರಜ ನಾಯಕ, ಹಾರವಾಡ ಗ್ರಾಪಂ ಉಪಾಧ್ಯಕ್ಷ ಮಂಜುನಾಥ ಟಾಕೇಕರ್, ಉದ್ಯಮಿ ಗಣಪತಿ ಮೂಲೆಮನೆ, ಗಣೇಶ್ ನಾಯ್ಕ ಹಾಗೂ ಗೋಪಾಲಕೃಷ್ಣ ನಾಯಕ ಗೆಳೆಯರ ಬಳಗದವರು ಉಪಸ್ಥಿತರಿದ್ದರು.