Slide
Slide
Slide
previous arrow
next arrow

ಮಕ್ಕಳ ಪ್ರತಿಭೆಯ ಅನಾವರಣಕ್ಕೆ ‘ಪ್ರತಿಭಾಕಾರಂಜಿ’ ಅತ್ಯುತ್ತಮ ವೇದಿಕೆ: ದಿನಕರ ಶೆಟ್ಟಿ

300x250 AD

ಹೊನ್ನಾವರ : ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಹೊರತರಲು ಪ್ರತಿಭಾಕಾರಂಜಿಯಂತ ಕಾರ್ಯಕ್ರಮವು ಅತ್ಯುತ್ತಮ ವೇದಿಕೆ ಒದಗಿಸುತ್ತದೆ. ನಮ್ಮ ಜಿಲ್ಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.

ಅವರು ಪಟ್ಟಣದ ಹೋಲಿ ರೋಸರಿ ಕಾನ್ವೆಂಟ್ ಹೈಸ್ಕೂಲ್ ನಲ್ಲಿ ಜಿಲ್ಲಾಡಳಿತ, ಜಿ. ಪಂ. ಉತ್ತರಕನ್ನಡ, ಶಾಲಾ ಶಿಕ್ಷಣ ಇಲಾಖೆ ಮತ್ತು ಪ. ಪೂ. ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ ಉತ್ತರಕನ್ನಡ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಕಾರ್ಯಕ್ರಮಗಳು ಅತ್ಯಂತ ಮಹತ್ವದ ಪಾತ್ರವಹಿಸುತ್ತವೆ. ಯಕ್ಷಗಾನ, ಸುಗ್ಗಿಯಂತಹ ಸಾಂಪ್ರದಾಯಿಕ ಕಲೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಶಿಕ್ಷಕರು ವಿಶೇಷ ಆಸಕ್ತಿ ವಹಿಸಬೇಕು. ತನ್ಮೂಲಕ ನಮ್ಮ ಜಿಲ್ಲೆಯ ಸಾಂಪ್ರದಾಯಿಕ ಕಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ. ಇಂದಿನ ಈ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಲು ವಿದ್ಯಾರ್ಥಿಗಳು ವಿಶೇಷ ಸಿದ್ಧತೆಯೊಂದಿಗೆ ಆಗಮಿಸಿದ್ದಾರೆ, ಅವರೆಲ್ಲರಿಗೂ ಶುಭಕೋರುತ್ತೇನೆ. ಶಿಕ್ಷಕ ವೃಂದದವರು ಯಾವುದೇ ಕಾರ್ಯಕ್ರಮವನ್ನು ಆಯೋಜಿಸಲಿ, ಅದನ್ನು ತುಂಬಾ ಅಚ್ಚುಕಟ್ಟಾಗಿ ಸಂಘಟಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

300x250 AD

ಹೊನ್ನಾವರ ಪ. ಪಂ. ಸದಸ್ಯೆ ಮೇಧಾ ನಾಯ್ಕ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ (ಅಭಿವೃದ್ಧಿ) ಎನ್. ಜಿ. ನಾಯಕ, ತಾ. ಪಂ. ಇ. ಓ. ಸುರೇಶ ನಾಯ್ಕ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ. ಎಸ್. ನಾಯ್ಕ್ ಹಾಗೂ ಆರ್. ಎಲ್. ಭಟ್, ಜಿಲ್ಲಾ ಉಪನಿರ್ದೇಶಕಿ ಲತಾ ನಾಯ್ಕ್, ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಹಾಗೂ ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.

Share This
300x250 AD
300x250 AD
300x250 AD
Back to top