ಅಂಕೋಲಾ: ಕಾರು ಡಿಕ್ಕಿ ಹೊಡೆದು ಸೈಕಲ್ ಸವಾರ ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ವಂದಿಗೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ತಾಲೂಕಿನ ನದಿಭಾಗ ನಿವಾಸಿ ಸೋಮೇಶ್ವರ ಗೋವಿಂದ ನಾಯ್ಕ(49) ಗಾಯಗೊಂಡ ವ್ಯಕ್ತಿಯಾಗಿದ್ದು, ಈತ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಮೇಲಿಂದ ಸೈಕಲ್‌ನೊಂದಿಗೆ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕಾರವಾರ ಕಡೆಯಿಂದ ಕುಮಟಾ ಕಡೆ ಹೋಗುತ್ತಿದ್ದ ಕಾರು ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರನ ಬಲ ಕಾಲು, ತಲೆ ಮತ್ತು ಮುಖಕ್ಕೆ ತೀವ್ರ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.