Slide
Slide
Slide
previous arrow
next arrow

ನೇಣಿಗೆ ಶರಣಾದ ಪ್ರಭಾರ ಪಿಡಿಒ

300x250 AD

ಮುಂಡಗೋಡ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹೊನ್ನತ್ತಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಆಗಿ ಕೆಲಸ ಮಾಡುತ್ತಿದ್ದ ತಾಲ್ಲೂಕಿನ ಸನವಳ್ಳಿ ಗ್ರಾಮದ ರಾಮಲಿಂಗೇಶ್ ಎಸ್.ಕಳಸಗೇರಿ (42) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸನವಳ್ಳಿ ಗ್ರಾಮದ ತೋಟದ ಮನೆಯಲ್ಲಿ ಸೋಮವಾರ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹೊನ್ನತ್ತಿ ಗ್ರಾಮ ಪಂಚಾಯಿತಿಯ ಪ್ರಭಾರಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು.

300x250 AD

ಭಾನುವಾರ ರಜೆ ಇರುವುದರಿಂದ ತನ್ನ ತೋಟಕ್ಕೆ ಬಂದಿದ್ದರು. ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡು, ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬಸ್ಥರು ಶಂಕಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This
300x250 AD
300x250 AD
300x250 AD
Back to top