ಭಟ್ಕಳ:ಭಟ್ಕಳ ಅಳ್ವೆಕೋಡಿಯ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಭಟ್ಕಳ ನೇತೃತ್ವದಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಮತ್ತು ತಾಲೂಕಾ ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಯಿತು.
ಪ್ರಾದೇಶಿಕ ನಿರ್ದೇಶಕರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕರಾವಳಿ ಪ್ರಾದೇಶಿಕ ವಿಭಾಗ ದುಗ್ಗೆಗೌಡ ಉಡುಪಿ ಉದ್ಘಾಟಿಸಿ, ಮಾತನಾಡಿದ ಅವರು ಪ್ರತಿಯೊಬ್ಬ ಮಹಿಳೆಯು ಕುಟುಂಬದಲ್ಲಿ ಹಾಗೂ ಸಮಾಜದಲ್ಲಿ ಇರುವ ಜವಾಬ್ದಾರಿಯ ಬಗ್ಗೆ ವಿವರಿಸಿದರು ಮನುಷ್ಯನ ವ್ಯಕ್ತಿತ್ವ ವಿಕಸನದ ಬಗ್ಗೆ ವಿವರಿಸಿದರು.
ಮುಖ್ಯ ಅತಿಥಿಗಳಾದ ದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮದರ್ಶಿಗಳಾದ ನಾರಾಯಣ ದೈಮನೆ ಕಾರ್ಯಕ್ರಮದ ಕುರಿತು ಶುಭ ಹಾರೈಸಿದರು ಮುಖ್ಯ ಅತಿಥಿಯಾದ ರಾಮ ಮೋಗೇರ ಪೂಜ್ಯರು ಮಾಡುತ್ತಿರುವ ಪ್ರತಿಯೊಂದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಶಿವಾನಿ ಶಾಂತರಾಮ ಮಾತನಾಡಿ ಮೊಬೈಲ್ ಬಳಕೆಯಿಂದ ಆಗುವ ಅನುಕೂಲತೆ ಮತ್ತು ಅನಾನುಕೂಲತೆಗಳ ಬಗ್ಗೆ ಮಾಹಿತಿ ನೀಡಿದರು.
ಶಿರಾಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಭಾಸ್ಕರ ದೈಮನೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ನಂತರ ತಾಲೂಕಿನಾದ್ಯಂತ ಇರುವ ಜ್ಞಾನವಿಕಾಸ ಕೇಂದ್ರದ ಮಹಿಳೆಯರಿಗಾಗಿ ಪುಷ್ಪಗುಚ್ಛ ಸ್ಪರ್ಧೆ, ಆರತಿ ತಟ್ಟೆ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಸ್ವ ಉದ್ಯೋಗ ಮಳಿಗೆಗಳು, ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು.
ತಾಲೂಕಿನ ವಿವಿಧ ಊರುಗಳಿಂದ ಆಗಮಿಸಿದ ಜ್ಞಾನವಿಕಾಸ ಕೇಂದ್ರದ ಮಹಿಳೆಯರಿಂದ ವಿವಿಧ ನೃತ್ಯಗಳು ನಡೆಯಿತು.
ಕಾರ್ಯಕ್ರಮದ ಸಮಾರೋಪದ ಹಂತದಲ್ಲಿ ವಿವಿಧ ಸ್ಪರ್ದೆಯಲ್ಲಿ ಭಾಗವಹಿಸಿ ಗೆದ್ದ ಮಹಿಳೆಯರಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗಣೇಶ ನಾಯ್ಕ,ಶ್ರೀಮತಿ ವಿನೋಧ ಬಾಲಚಂದ್ರ, ಕುಮಾರಿ ಗೀತಾ, ಮುಕ್ತಾ ನಾಯ್ಕ, ಶ್ರೀಮತಿ ರಾಜೀವಿ ಮುಂತಾದವರು ಉಪಸ್ಥಿತರಿದ್ದರು.