Slide
Slide
Slide
previous arrow
next arrow

ಆರನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

300x250 AD

ಕಾರವಾರ: ಪ್ರಸಕ್ತ ಸಾಲಿನ ಕಾರವಾರ ತಾಲೂಕಿನ ಶಿರವಾಡದ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಡಿ.31 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಪ್ರವೇಶ ಪರೀಕ್ಷೆಯು 2024ರ ಫೆಬ್ರವರಿ 18 ರಂದು ನಿಗದಿಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ಲ್ಲಿ ಅರ್ಜಿಯನ್ನು ಭರ್ತಿ ಮಾಡಲು ಶಿರವಾಡದ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://kea.kar.nic.in ನಲ್ಲಿ https://kreis.karnataka.gov.in ಲಿಂಕ್‌ನ್ನು ಆಯ್ಕೆ ಮಾಡಿಕೊಳ್ಳುವುದು ಅಥವಾ ದೂರವಾಣಿ ಸಂಖ್ಯೆTel:+9108382200260 ಗೆ ಸಂಪರ್ಕಿಸಬಹುದು ಎಂದು ಶಿರವಾಡದ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: ವಿದ್ಯಾರ್ಥಿಯ ಎಸ್.ಎ.ಟಿ.ಎಸ್ ನಂ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ.ದ ಪ್ರತಿ ಮತ್ತು ಆರ್ ಡಿ ಸಂಖ್ಯೆ, ಚಾಲ್ತಿಯಲ್ಲಿರುವ ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಇತ್ತೀಚಿನ 2 ಭಾವಚಿತ್ರ, ಆಧಾರ್ ಕಾರ್ಡ್ ವಿಶೇಷ ವರ್ಗಕ್ಕೆ ಸೇರಿದ್ದರೆ ಸಂಬಂಧಿಸಿದ ಪ್ರಮಾಣ ಪತ್ರ ದಾಖಲಾತಿಗಳನ್ನು ಹೊಂದಿರಬೇಕು.

300x250 AD
Share This
300x250 AD
300x250 AD
300x250 AD
Back to top